ಅಕುಶಲ ದೈಹಿಕ ಕೆಲಸ ಮಾಡಲು ಇಚ್ಛಿಸುವ ಗ್ರಾಮೀಣ ಪ್ರದೇಶದ ವಯಸ್ಕರಿಗೆ ಒಂದು ಆರ್ಥಿಕ ವರ್ಷದಲ್ಲಿ ಕನಿಷ್ಠ ನೂರು ದಿನಗಳ ಉದ್ಯೋಗಾವಕಾಶಗಳನ್ನು ಸ್ಥಳೀಯವಾಗಿ ನೀಡಿ, ಬಡಜನರ ಬದುಕನ್ನು ಹಸನಾಗಿಸುವುದು
ಗ್ರಾಮೀಣ ಪ್ರದೇಶದಲ್ಲಿ ಬಡಜನರನ್ನು ತೊಡಗಿಸಿಕೊಂಡು ಕೃಷಿ ಕಾರ್ಮಿಕರಿಗೆ ಕೂಲಿ ನೀಡುವ ಉದ್ಯೋಗ, ಆಹಾರಭದ್ರತೆ, ದೀರ್ಘಕಾಲ ಬಾಳಿಕೆ ಬರುವಂತಹ ಸ್ವತ್ತುಗಳ ನಿರ್ಮಾಣ ಮುಂತಾದ ಕಾರ್ಯಕ್ರಮಗಳನ್ನು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ [MGNREGS] ಕೈಗೊಳ್ಳಲಾಗುತ್ತಿದೆ.
ಕೂಲಿಯಾದಾರಿತ ಉದ್ಯೋಗವನ್ನು ಸೃಜಿಸಿ, ಗ್ರಾಮೀಣ ಜನರ ಜೀವನಕ್ಕೆ ಭದ್ರತೆಯನ್ನು ಒದಗಿಸುವುದು
ಒಂದು ಆರ್ಥಿಕ ವರ್ಷದಲ್ಲಿ ಉದ್ಯೋಗ ಬಯಸುವ ಪ್ರತಿ ನೋಂದಾಯಿತ ಕುಟುಂಬಕ್ಕೆ ನೂರು ದಿನಗಳಿಗೆ ಕಡಿಮೆ ಇಲ್ಲದ ಅಕುಶಲ ಕೆಲಸವನ್ನು ಒದಗಿಸಲಾಗುವುದು
ಕನಿಷ್ಠ ಹದಿನೈದು ದಿನಗಳಿಗೊಮ್ಮೆ ಕೂಲಿಯನ್ನು ಪಾವತಿಸಲಾಗುವುದು
ಮಹಿಳೆಯರಿಗೆ ಮತ್ತು ಪುರುಷರಿಗೆ ಸಮಾನ ಕೂಲಿ ನೀಡಲಾಗುವುದು
ರಿಯಾಯಿತಿ
ಯಾರಿಗೆ / ಅರ್ಹತೆ ?
ಯಾರಿಗೆ?
ಅರ್ಹತೆಗಳು/ಮಾನದಂಡಗಳು
ಕುಟುಂಬ ಉದ್ಯೋಗ ಚೀಟಿಯಲ್ಲಿ ಹೆಸರಿರುವ ಕುಟುಂಬದ ಪ್ರತಿ ವಯಸ್ಕ ಅಕುಶಲ ದೈಹಿಕ ಕೆಲಸಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಆರುವರ್ಷಕ್ಕೂ ಕಡಿಮೆ ವಯಸ್ಸಿನ, ಐದಕ್ಕಿಂತ ಹೆಚ್ಚಿನ ಮಕ್ಕಳು ಕಾರ್ಮಿಕರೊಂದಿಗೆ ಬಂದಲ್ಲಿ, ಅವರನ್ನು ನೋಡಿಕೊಳ್ಳಲು ಒಬ್ಬ ಮಹಿಳೆಯರನ್ನು ನೇಮಿಸಬೇಕು ಮತ್ತು ದಿನದ ಕನಿಷ್ಠ ಕೂಲಿಯನ್ನು ಆ ಮಹಿಳೆಗೆ ಪಾವತಿಸಬೇಕು.
ಕಾಮಗಾರಿಯ ಕಾರಣದಿಂದ ಕಾರ್ಮಿಕರು, ಶಾಶ್ವಾತವಾಗಿ ಅಂಗವಿಕಲರಾದರೆ ಅಥವಾ ಮೃತಪಟ್ಟರೆ ಸಂದರ್ಭಕ್ಕೆ ತಕ್ಕಂತೆ ಆವರು ಅಥವಾ ಅವರ ವಾರಸುದಾರರು ರೂ.25,000/- ಅಥವಾ ಕೇಂದ್ರ ಸರ್ಕಾರದಿಂದ ನಿಗದಿಪಡಿಸಬಹುದಾದ ಪರಿಹಾರವನ್ನು ಪಡೆಯಲು ಹಕ್ಕುಳ್ಳವರಾಗಿರುತ್ತಾರೆ.