ನಿವೇಶನ ರಹಿತರಿಗೆ ನಿವೇಶನ ಯೋಜನೆಯಡಿ ನಿವೇಶನ ಒದಗಿಸಿ, ಬಡಾವಣಿಗಳಿಗೆ ಮೂಲಭೂತ ಸೌಲಭ್ಯವನ್ನು ಒದಗಿಸಲಾಗುವುದು
ರಿಯಾಯಿತಿ
ಸಾಮಾನ್ಯ ವರ್ಗದವರಿಗೆ ಶೇ.90, ಅಲ್ಪಸಂಖ್ಯಾತರಿಗೆ ಶೇ.10ರಷ್ಟು ಮೀಸಲಾತಿಯನ್ನು ನೀಡಲಾಗುವುದು
ಯಾರಿಗೆ / ಅರ್ಹತೆ ?
ಯಾರಿಗೆ?
ವಸತಿ ರಹಿತರಿಗೆ
ಅರ್ಹತೆಗಳು/ಮಾನದಂಡಗಳು
ಅರ್ಜಿದಾರರು ಕಡ್ಡಾಯವಾಗಿ ಮಹಿಳೆಯಾಗಿರಬೇಕು (ವಿವಾಹಿತ ಅಥವಾ ಏಕ ಮಹಿಳಾ ಒಡೆತನದ ಗೃಹಿಣಿ) ಮಾಜಿ ಯೋಧರು,ವಿಧುರರು, ಅಂಗವಿಕಲರು ಮತ್ತು ಹಿರಿಯ ನಾಗರೀಕರಾಗಿದ್ದಲ್ಲಿ, ಪುರುಷರು ಸಹ ಅರ್ಹರಾಗಿರುತ್ತಾರೆ
ಅರ್ಜಿದಾರರ ಕುಟುಂಬವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದಿದ್ದು, ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದವರಾಗಿದ್ದಲ್ಲಿ ರೂ. 32,000/- ಕ್ಕಿಂತ ಕಡಿಮೆ ಇರಬೇಕು ಹಾಗೂ ನಗರ ಪ್ರದೇಶದವರಾಗಿದ್ದಲ್ಲಿ ರೂ.87,600/- ಕ್ಕಿಂತ ಕಡಿಮೆ ಇರಬೇಕು
ಅರ್ಜಿದಾರರ ಕುಟುಂಬವು ವಸತಿರಹಿತರಾಗಿದ್ದು, ಅರ್ಜಿದಾರರು ಅಥವಾ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಕರ್ನಾಟಕದ ಯಾವುದೇ ಭಾಗದಲ್ಲಿ ಸ್ವಂತ ಮನೆಯನ್ನು ಹೊಂದಿರಬಾರದು. ಶಿಥಿಲಗೊಂಡ ಮನೆ ಅಥವಾ ಗುಡಿಸಲಿನಲ್ಲಿ ವಾಸಿಸುತ್ತಿರುವವರು ಅರ್ಹರಾಗಿರುತ್ತಾರೆ
ಬೇರೆ ಯಾವುದೇ ಯೋಜನೆ/ಇಲಾಖೆಯಿಂದ ಈಗಾಗಲೇ ವಸತಿ ಸೌಲಭ್ಯ ಪಡೆದಿರಬಾರದು
ನಾಗರೀಕರು ಈ ಸೇವೆಯನ್ನು ಪಡೆಯಲು ಗ್ರಾಮೀಣ
ಪ್ರದೇಶವಾಗಿದ್ದಲ್ಲಿ ಗ್ರಾಮ ಪಂಚಾಯತಿಯ ಪಂಚಾಯತ್
ಅಭಿವೃದ್ಧಿ ಅಧಿಕಾರಿಯನ್ನು ಖುದ್ದಾಗಿ ಭೇಟಿ ನೀಡಿ ಯೋಜನೆಯ
ಮಾಹಿತಿಯನ್ನು ಪಡೆಯಬಹುದಾಗಿದೆ
ನಗರ ಪ್ರದೇಶವಾಗಿದ್ದಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಖುದ್ದಾಗಿ ಭೇಟಿ ನೀಡಿ ಯೋಜನೆಯ ಮಾಹಿತಿಯನ್ನು ಪಡೆಯಬಹುದಾಗಿದೆ