ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿಯ ಎಲ್ಲಾ ಮಕ್ಕಳಿಗೆ ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟ ಹಾಗೂ ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ವಿತರಿಸಲಾಗುತ್ತಿದೆ. (ಅಂದರೆ 10ನೇ ತರಗತಿಯ ನಂತರದ ವಿದ್ಯಾರ್ಥಿಗಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ).
ಮಧ್ಯಾಹ್ನದ ಬಿಸಿಯೂಟ ಹಾಗೂ ಕ್ಷೀರಭಾಗ್ಯ.
ಕರ್ನಾಟಕ ರಾಜ್ಯ ಸರ್ಕಾರದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳು ವ್ಯಾಸಂಗ ಮಾಡುತ್ತಿರಬೇಕು.
ಯೋಜನೆಯ ಲಾಭವನ್ನು ಪಡೆಯುವಾಗ ಆಯಾ ಶಾಲಾ ಮುಖ್ಯ ಶಿಕ್ಷಕರನ್ನು ಭೇಟಿಯಾಗಬಹುದು.
ಕ್ಷೇತ್ರ ಶಿಕ್ಷಣಾಧಿಕಾರಿಗಳು/ ಉಪನಿರ್ದೇಶಕರ ಕಛೇರಿಯಲ್ಲಿನ ನೋಡಲ್ ಅಧಿಕಾರಿಗಳನ್ನು ಪ್ರತಿ ವರ್ಷ ಫೆಬ್ರವರಿಯಿಂದ ಏಪ್ರಿಲ್ ವರೆಗೆ ಸಂಪರ್ಕಿಸಬಹುದು.
ಶಾಲಾ ಹಂತದಲ್ಲಿ ಮುಖ್ಯ ಶಿಕ್ಷಕರು, ಸರ್ಕಾರಿ ಮತ್ತು ಅನುದಾನಿತ ಕಿರಿಯ/ ಹಿರಿಯ/ ಪ್ರಾಥಮಿಕ/ ಪ್ರೌಢ ಶಾಲೆಯವರನ್ನು ಸಂಪರ್ಕಿಸಬಹುದು ಹಾಗೂ ಆಯಾ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರನ್ನು ಸಂಪರ್ಕಿಸಬಹುದಾಗಿರುತ್ತದೆ.
http://www.schooleducation.kar.nic.in/
[email protected]
ಸಹಾಯವಾಣಿ: 080-22484716