ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುವ ಭರವಸೆ ನೀಡಲಾಗಿತ್ತು, ಆದರೆ ಈಗ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ ನೀಡಲಾಗುತ್ತಿದೆ. ಉಳಿದ 5 ಕೆಜಿ ಅಕ್ಕಿ ಬದಲಿಗೆ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಗಳಂತೆ ಐದು ಕೆಜಿ ಅಕ್ಕಿಗೆ ಒಟ್ಟು 170 ರೂಪಾಯಿಯನ್ನು ನೇರವಾಗಿ ಖಾತೆಗೆ ಜಮೆ ಮಾಡಲಾಗುತ್ತಿದೆ. ಇದನ್ನು ಹೊರತುಪಡಿಸಿ ಗೃಹಲಕ್ಷ್ಮೀ ಯೋಜನೆಗೂ ಕೂಡಾ ರೇಷನ್ ಕಾರ್ಡ್ ಮುಖ್ಯವಾಗುತ್ತದೆ..
ಫಲಾನುಭವಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು ಹಣವನ್ನು ಆಧಾರ್ ಸಂಖ್ಯೆಗಳಿಗೆ ಲಿಂಕ್ ಮಾಡಿದ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗುತ್ತದೆ.
ತಮ್ಮ ಪಡಿತರ ಚೀಟಿಯೊಂದಿಗೆ ಪಡಿತರ ಅಂಗಡಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು