ಕನ್ನಡ ಚಿಂತನೆ : ಸಾರ್ವಜನಿಕರಿಗೆ ಕನ್ನಡ ಭಾಷೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಭಾಷಾಭಿಮಾನ ಬೆಳೆಸಲು ಪ್ರಾಧಿಕಾರವು ಬೆಂಗಳೂರು ಸೇರಿದಂತೆ ಮಹಾನಗರ ಪಾಲಿಕೆಗಳಲ್ಲಿ ಕನ್ನಡ ಚಿಂತನೆ ಎಂಬ ಕಾರ್ಯಕ್ರಮವನ್ನು ನಡೆಸುತ್ತಾ ಬಂದಿದ್ದು, ಪ್ರತಿ ಕಾರ್ಯಕ್ರಮಕ್ಕೆ ಪ್ರಾದಿಕಾರದ ವತಿಯಿಂದ ರೂ. 20,000/- ಗಳನ್ನು ನೀಡಲಾಗುತ್ತಿದೆ.
ಕನ್ನಡ ಭವನ : ಗಡಿ ಭಾಗಗಳಲ್ಲಿ ಕನ್ನಡ ಪರ ಕಾರ್ಯಕ್ರಮಗಳನ್ನು ನಡೆಸಲು ಸುಸಜ್ಜಿತವಾದ ಸ್ಥಳ ಇಲ್ಲದೆ ಇರುವಂತಹ ತಾಲ್ಲೂಕುಗಳಲ್ಲಿ ಕನ್ನಡ ಭವನಗಳನ್ನು ನಿರ್ಮಾಣ ಮಾಡಲು ಸಂಬಂಧಿಸಿದ ಕ್ಷೇತ್ರದ ವಿಧಾನಸಭಾ ಸದಸ್ಯರ ಶಿಫಾರಸ್ಸಿನ ಮೇರೆಗೆ ಕನ್ನಡ ಭವನ ನಿರ್ಮಾಣ ಮಾಡುವ ಸ್ಥಳದಿಂದ ನೀಲಿನಕ್ಷೆ ಹಾಗೂ ಭವನ ನಿರ್ಮಾಣಕ್ಕೆ ಆಕ್ಷೇಪಣೆಗಳು ಇಲ್ಲದಿರುವುದನ್ನು ಗಮನಿಸಿ ಆಯಾ ಜಿಲ್ಲಾಧಿಕಾರಿಗಳ ಮುಖಾಂತರ ಸಹಾಯಧನವನ್ನು ಬಿಡುಗಡೆ ಮಾಡಲಾಗುತ್ತಿದೆ. ಅನುದಾನ ಲಭ್ಯತೆಯ ಆಧಾರದಲ್ಲಿ ಹೋಬಳಿ ಮಟ್ಟದಲ್ಲಿ ರೂ. 10.00 ಲಕ್ಷ, ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ರೂ. 15.00 ಲಕ್ಷ (ವಿಶೇಷ ಸಂದರ್ಭದಲ್ಲಿ ಗರಿಷ್ಟ ರೂ. 20.00 ಲಕ್ಷ ಮೀರದಂತೆ) ಹಣವನ್ನು ಬಿಡುಗಡೆ ಮಾಡಲಾಗುತ್ತದೆ.
ಯಾರಿಗೆ / ಅರ್ಹತೆ ?
ಯಾರಿಗೆ?
ಅರ್ಹತೆಗಳು/ಮಾನದಂಡಗಳು
ಕನ್ನಡ ಮಾಧ್ಯಮ ಪ್ರಶಸ್ತಿ : ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ತು, ಯುವಜನಾ ಮತ್ತು ಕ್ರೀಡಾ ಇಲಾಖೆ ಹಾಗೂ ಯುವ ಬರಹಗಾರರ ಮತ್ತು ಕಲಾವಿದರ ಬಳಗದ ಸಹಕಾರದೊಂದಿಗೆ ಬೆಂಗಳೂರು ನಗರದಲ್ಲಿ ಕಳೆದ 17 ವರ್ಷಗಳಿಂದ ಪ್ರತಿ ಶುಕ್ರವಾರ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಗರದ ಯವನಿಕಾ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಸಿಕೊಂಡುಬರಲಾಗುತ್ತಿದೆ.
ಹೊರ ರಾಜ್ಯ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ : ನೆರೆ ರಾಜ್ಯಗಳಾದ ಗೋವಾ, ತಮಿಳುನಾಡು, ಕೇರಳ, ಅಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಅಭ್ಯಾಸ ಮಾಡಿದ ಪ್ರತಿ ಶಾಲೆಯ 03 ಮಕ್ಕಳಿಗೂ ಸಹ ಗೌರವಿಸಲಾಗುತ್ತಿದೆ. ಶಾಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ತಲಾ ರೂ. 10,000/-, ರೂ, 9,000/-, ರೂ. 8,000/- ನೀಡಿ ಗೌರವಿಸಲಾಗುತ್ತದೆ.
ಕನ್ನಡ ಕಲಿಕಾ ಕೇಂದ್ರ : ಗಾರ್ಮೆಂಟ್ಸ್, ಕಾರ್ಖಾನೆಗಳು, ಓ.ಜಿ.ಸಿ. ಕೇಂದ್ರ ಸರ್ಕಾರಿ ಸಾಮ್ಯದ ಸಂಸ್ಥೆಗಳು ಮತ್ತು ಅಂತರಾಷ್ಟ್ರೀಯ ವಿಮಾಣ ನಿಲ್ದಾಣಗಳಲ್ಲಿ ಕೆಲಸ ನಿರ್ವಹಿಸುತಿರುವ ಭಾಷಾ ಅಲ್ಪಸಂಖ್ಯಾತರು, ಮತ್ತು ಕನ್ನಡೇತರರಿಗೆ ಕನ್ನಡ ಕಲಿಸುವ ಸಲುವಾಗಿ ಕನ್ನಡ ಕಲಿಕಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಹಾಗೂ ಒಂದು ಕಾರ್ಯಕ್ರಮಕ್ಕೆ ಪ್ರಾಧಿಕಾರದಿಂದ ರೂ. 30,000/- ಗಳ ಸಹಾಯಧನ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸುವ ವಿಧಾನ
ಸಲ್ಲಿಸಬೇಕಾದ ದಾಖಲೆಗಳು
ಸಂಪರ್ಕ
ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಕನ್ನಡ ಭವನ ಜಯಚಾಮರಾಜ ರಸ್ತೆ ಬೆಂಗಳೂರು ,
ಕರ್ನಾಟಕ – 560002