1.ಈ ಯೋಜನೆಯಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ ರೂ.10,000/- ದಂತೆ ಗರಿಷ್ಠ 3 ವರ್ಷಗಳ ಅವಧಿಗೆ ವ್ಯಾಸಂಗ ವೇತನ/ಫೆಲೋಶಿಪ್ ಅನ್ನು ಅಭ್ಯರ್ಥಿಯ ಬ್ಯಾಂಕ್ ಖಾತೆಗೆ ಜಮಾ ಮಾಡುವುದು.
2.ವ್ಯಾಸಂಗ ವೇತನ/ಫೆಲೋಶಿಪ್ ಅನ್ನು ಮೂರು ವರ್ಷಗಳಿಗಿಂತ ಹೆಚ್ಚಿನ ಅವಧಿಗೆ ಒದಗಿಸತಕ್ಕದ್ದಲ್ಲ.
ಪೂರ್ಣಾವಧಿ ಪಿಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಡಿ.ದೇವರಾಜ ಅರಸುರವರ ಜನ್ಮ ಶತಮಾನೋತ್ಸವದ ಅಂಗವಾಗಿ
2015-16ನೇ ಸಾಲಿನಿಂದ ಮಾಸಿಕ ರೂ.5,000/- ದಂತೆ ವ್ಯಾಸಂಗ ವೇತನ/ಫೆಲೋಶಿಪ್ ಅನ್ನು ನೀಡಿ, ಉನ್ನತ ಶಿಕ್ಷಣ/ಸಂಶೋಧನೆಯಲ್ಲಿ ತೊಡಗಿಕೊಳ್ಳಲು
ನೆರವು ನೀಡಲಾಗುತ್ತಿದೆ. 2018-19 ನೇ ಸಾಲಿನಿಂದ ವ್ಯಾಸಂಗ ವೇತನ/ಫೆಲೋಶಿಪ್ ಅನ್ನು ಮಾಸಿಕ ರೂ.5000/- ದಿಂದ ರೂ.10,000/- ಕ್ಕೆ ಹೆಚ್ಚಿಸಿ ಆದೇಶಿಸಿದೆ.
ಶೈಕ್ಷಣಿಕ ಅರ್ಹತೆ
1.ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು.
2.ವಿಶ್ವವಿದ್ಯಾಲಯ/ಅಧಿಕೃತ ಸಂಸ್ಥೆಗಳಲ್ಲಿನ ಸಂಶೋಧನಾ ಮಾರ್ಗದರ್ಶಕರಡಿಯಲ್ಲಿ ಪಿಎಚ್.ಡಿ
ಅಧ್ಯಯನಕ್ಕಾಗಿ ನೋಂದಣಿ ಮಾಡಿಕೊಂಡಿರಬೇಕು.
3.ಈ ನೋಂದಣಿಯು ವ್ಯಾಸಂಗ ವೇತನ/ಫೆಲೋಶಿಪ್‍ಗಾಗಿ ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಹಿಂದಿನ 2 ವರ್ಷಗಳೊಳಗಿದ್ದು,
ಅರ್ಜಿ ಸಲ್ಲಿಸುವ ಸಾಲಿನಿಂದ ಪ್ರಥಮ ವರ್ಷದ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರಬೇಕು.
4.ಈ ಸೌಲಭ್ಯವನ್ನು ಪಡೆಯಲಿಚ್ಛಿಸುವ ಅಭ್ಯರ್ಥಿಯು ಭಾರತ ಸರ್ಕಾರ / ಕರ್ನಾಟಕ ಸರ್ಕಾರ / ವಿಶ್ವವಿದ್ಯಾಲಯ
ಅಥವಾ ಇತರೆ ಯಾವುದೇ ಸಂಸ್ಥೆಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‍ಗೆ ಆಯ್ಕೆಯಾಗಿರಬಾರದು
Home – Backward Classes Welfare Department
Email : [email protected]
Office Timings: 10.30 AM To 5.30 PM
Helpline Number: 8050770004