ತಾಯಿ ಮಗು ಸಹಾಯ ಹಸ್ತ
ಮೇ 3, 2024ಮದುವೆ ಸಹಾಯ ಧನ (ಗೃಹ ಲಕ್ಷ್ಮೀ ಬಾಂಡ್)
ಮೇ 3, 2024
ಸೌಲಭ್ಯಗಳು
- ಈ ಕೆಳಕಂಡ ಷರತ್ತುಗಳನ್ನು ಪೂರೈಸಿದಾಗ ಮಾತ್ರ ಸಹಾಯ ಧನವನ್ನು ಮಂಜೂರು ಮಾಡಬೇಕಾಗುತ್ತದೆ
- ನೋಂದಾಯಿತ ಮಹಿಳಾ ಕಾರ್ಮಿಕರು ಮೊದಲ ಎರಡು ಜೀವಂತ ಮಕ್ಕಳಿಗೆ ಮಾತ್ರ ಸಹಾಯ ಧನವನ್ನು ಪಡೆಯಲು ಅರ್ಹರಾಗಿರುತ್ತಾರೆ (ಎರಡನೇ ಹಕ್ಕು ಸಾಧನೆ ಸಹಾಯ ಧನ ಅರ್ಜಿಯು ಎರಡನೇ ಮಗುವಿನ ಹೆರಿಗೆ ಎಂದು ಹೇಳುವ ಅಫೀಡೆವಿಟ್ ಅನ್ನು ಒಳಗೊಂಡಿರಬೇಕು).
- ಒಂದು ವೇಳೆ ಈಗಾಗಲೇ ನೋಂದಾಯಿತ ಮಹಿಳಾ ಕಾರ್ಮಿಕರಿಗೆ ಎರಡು ಮಕ್ಕಳಿದ್ದರೆ, ಅವಳು ಈ ಸೌಲಭ್ಯವನ್ನು ಪಡೆಯಲು ಅರ್ಹರಾಗುವುದಿಲ್ಲ.
- ಜನನ ಮತ್ತು ಮರಣದ ನೋಂದಾಣಾ ಅಧಿಕಾರಿಯಿಂದ ಜನನದ ಪ್ರಮಾಣ ಪತ್ರವನ್ನು ಪಡೆಯಬೇಕು. ಅಥವಾ ಸರ್ಕಾರಿ ಆಸ್ಪತ್ರೆ, ಕರ್ನಾಟಕ ರಾಜ್ಯದಲ್ಲಿ ನೋಂದಾಯಿತ ಅಂಗೀಕೃತ ಆಸ್ಪತ್ರೆಗಳಲ್ಲಿ ದಾಖಲಾಗಿ ಆ ಸಂಸ್ಥೆಯ ಮುಖ್ಯಸ್ಥರಿಂದ ಸಹಿ ಮಾಡಿದ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆ
- ಅರ್ಜಿದಾರರು ಅರ್ಜಿಯನ್ನು ಸಲ್ಲಿಸುವುದು
- ನೋಂದಣಾಧಿಕಾರಿಗಳಾದ ಹಿರಿಯ / ಕಾರ್ಮಿಕ ನಿರೀಕ್ಷಕರಿಂದ ಪರಿಶೀಲನೆ
- ಕಾರ್ಮಿಕ ಅಧಿಕಾರಿಯವರಿಂದ ಪರಿಶೀಲನೆ ಮತ್ತು ಅನುಮೋದನೆ
- ಮಂಡಳಿಯ ಕಾರ್ಯದರ್ಶಿಯ ಅಥವಾ ಮಂಡಳಿಯ ಪರವಾಗಿ ನೇಮಕವಾದ ಅಧಿಕೃತ ಅಧಿಕಾರಿಯು ನೋಂದಾಯಿತ ಮಹಿಳಾ ಕಾರ್ಮಿಕರಿಂದ ಅರ್ಜಿಯನ್ನು ಪಡೆದು ಆಕೆಯ ಗಂಡು/ಹೆಣ್ಣು ಮಗುವಿನ ಜನನಕ್ಕೆ ರೂ.50,000/- (ಸರ್ಕಾರದ ಅಧಿಸೂಚನೆ ಸಂಖ್ಯೆ ಎಲ್ ಡಿ 458 ಎಲ್ ಇಟಿ 2021 ಬೆಂಗಳೂರು ದಿನಾಂಕ: 08-08-2022 ರಂತೆ ) ಮೊದಲ ಎರಡು ಹೆರಿಗೆಗೆ ಸಹಾಯಧನವನ್ನು ಮಂಜೂರು ಮಾಡಲಾಗುವುದು. (ಮಗುವಿನ ಹೆರಿಗೆ ಆದ ಕುರಿತು ದಾಖಲೆಗಳನ್ನು ಸಲ್ಲಿಸುವುದು)
- ಮಂಡಳಿ ನೀಡಿರುವ ಗುರುತಿನ ಚೀಟಿ/ಸ್ಮಾರ್ಟ್ ಕಾರ್ಡ್
- ಎರಡನೇ ಮಗುವಿನ ಹೆರಿಗೆ ಎಂದು ಅಫಿಡವಿಟ್ ಸಲ್ಲಿಸುವುದು
- ಬ್ಯಾಂಕ್ ಖಾತೆ ಪುರಾವೆ
- ಮಕ್ಕಳ ಛಾಯಾಚಿತ್ರ
- ಉದ್ಯೋಗ ದೃಡೀಕರಣ ಪತ್ರ
- ಡಿಸ್ಚಾರ್ಜ್ ಸಾರಾಂಶ
- ಮಗುವಿನ ಜನನ ಪ್ರಮಾಣಪತ್ರ
- ಮಗುವಿನ ಜನನದ ಆರು ತಿಂಗಳೊಳಗೆ ಅರ್ಜಿಯನ್ನು ಸಲ್ಲಿಸುವುದು