ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲೀನ ವೃತ್ತಿ ನಿರ್ವಹಿಸುತ್ತಿದ್ದು, ಪ್ರತಿನಿತ್ಯ ಸಾರ್ವಜನಿಕರ ಮನೆ ಬಾಗಿಲಿಗೆ ಪತ್ರಿಕೆಗಳನ್ನು ವಿತರಿಸುತ್ತಾರೆ. ಸದರಿ ಕಾರ್ಮಿಕರಲ್ಲಿ ಬಹುತೇಕರು ದಿನಪತ್ರಿಕೆ ವಿತರಿಸಲು ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದು, ಅಪಘಾತಕ್ಕೊಳಗಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಸದರಿ ಕಾರ್ಮಿಕರಿಗೆ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿತರಿಸುವ ಮೂಲಕ ಸಾಮಾಜಿಕ ಭದ್ರತೆ ಒದಗಿಸುವುದು ಯೋಜನೆಯ ಉದ್ದೇಶವಾಗಿರುತ್ತದೆ.
ಎಲ್ಲಾ ಪತ್ರಿಕಾ ವಿತರಕರು ಇಂದೇ, ಇ-ಶ್ರಮ್ ಪೋರ್ಟಲ್ eshram.gov.in ಅಲ್ಲಿ ಸ್ವಯಂ ಆಗಿ ಅಥವಾ ಹತ್ತಿರದ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ. (ನೋಂದಣಿ ವಿಧಾನಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ)
ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಅರ್ಹ ಫಲಾನುಭವಿಗಳು, ಯೋಜನೆಯಡಿ ನಿಗದಿಪಡಿಸಿದ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ ಸೌಲಭ್ಯಯನ್ನು ಪಡೆಯಬಹುದಾಗಿದೆ.
ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು/ ಕಾರ್ಮಿಕ ನಿರೀಕ್ಷಕರ ಕಛೇರಿಗಳು, ಕಾರ್ಮಿಕ ಇಲಾಖೆ.
ಕಾರ್ಮಿಕ ಸಹಾಯವಾಣಿ : 155214 (24×7)
ಇಲ್ಲ