ಇ-ಶ್ರಮ ಪೋರ್ಟಲ್:
ಆಧಾರ್ ಸಂಖ್ಯೆಗೆ ಜೋಡಣೆಯಾದ ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ದತ್ತಾಂಶವನ್ನು ಸಿದ್ದಪಡಿಸಲು, ಕಾರ್ಮಿಕ ಹಾಗೂ ಉದ್ಯೋಗ ಮಂತ್ರಾಲಯವು ಇ-ಶ್ರಮ ಪೋರ್ಟಲ್ ಅನ್ನು (www.eshram.gov.in) ಅಭಿವೃದ್ಧಿಪಡಿಸಿರುತ್ತದೆ. ಇದು ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯಗಳನ್ನು ವಿಸ್ತರಿಸಲು ಅನುಕೂಲವಾಗುವಂತೆ ಕಾರ್ಮಿಕರ ಹೆಸರು, ವೃತ್ತಿ, ವಿಳಾಸ, ವಿದ್ಯಾರ್ಹತೆ, ಕೌಶಲ್ಯದ ವಿಧ, ಕುಟುಂಬದ ವಿವರ, ಬ್ಯಾಂಕ್ ಖಾತೆ ವಿವರ ಇತ್ಯಾದಿ ವಿವರಗಳನ್ನು ಒಳಗೊಂಡಿರುತ್ತದೆ.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ಟೈಲರ್‍ಗಳು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಕೇಂದ್ರ ಸರ್ಕಾರವು ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು ನೋಂದಣಿಯಾಗಬಹುದಾಗಿದೆ.
ಇ-ಶ್ರಮ್ ಪೋರ್ಟಲ್ www.eshram.gov.in ನಲ್ಲಿ ಸ್ವಯಂ ನೋಂದಣಿ (ನೋಂದಣಿ ವಿಧಾನಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ) ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (CSC)ಗಳಿಗೆ ಬೇಟಿ ನೀಡಿ ನೋಂದಣಿ ಮಾಡಿಸಿಕೊಳ್ಳಬಹುದು.
ಇ-ಶ್ರಮ್ ಪೋರ್ಟಲ್‍ನಲ್ಲಿ ನೋಂದಣಿಯು ಉಚಿತವಾಗಿದ್ದು, ಯಶಸ್ವಿ ನೋಂದಣಿಯ ನಂತರ ಫಲಾನುಭವಿಗಳು ಸ್ಥಳದಲ್ಲಿಯೆ ಗುರುತಿನ ಚೀಟಿಯನ್ನು (UAN) ಪಡೆಯಬಹುದಾಗಿದೆ. ಇದು ದೇಶದಾದ್ಯಂತ ಹಾಗೂ ಜೀವಿತಾವಧಿಯ ಮಾನ್ಯತೆ ಹೊಂದಿರುತ್ತದೆ.
ಕಾರ್ಮಿಕ ಸಹಾಯವಾಣಿ : 155214 (24×7)
ಇ-ಶ್ರಮ್ ಸಹಾಯವಾಣಿ : 14434 (ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 08:00 ರಿಂದ ರಾತ್ರಿ 08:00ರವರೆಗೆ)
ದೂರುಗಳನ್ನು ಸಲ್ಲಿಸಲು: www.gms.eshram.gov.in
ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳ ಮಾಹಿತಿಯನ್ನು ಪಡೆಯಲು : https://findmycsc.nic.in/csc/ ವೀಕ್ಷಿಸಿ.
ಇಲ್ಲ