ಏತ ನೀರಾವರಿ ಯೋಜನೆ: ಈ ಯೋಜನೆಯಡಿಯಲ್ಲಿ ನಿರಂತರವಾಗಿ ಹರಿಯುತ್ತಿರುವ ನೀರನ್ನು (ನದಿ) ಪೈಪ್ಲೈನ್ ಮೂಲಕ ಮೇಲಕ್ಕೆ ಎತ್ತಿ, ಕೃಷಿ ಜಮೀನಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲಾಗುತ್ತದೆ. ಈ ಯೋಜನೆಯನ್ನು ನಿಗಮವು ಅನುಷ್ಠಾನಗೊಳಿಸಿ ನಂತರ ಅದನ್ನು ಫಲಾನುಭವಿಗಳ ಗ್ರಾಹಕರ ಸಹಕಾರ ಸಂಘಕ್ಕೆ ಹಸ್ತಾಂತರ ಮಾಡಲಾಗುವುದು. ಉತ್ತಮ ಬೆಳೆ ಪಡೆಯುವ ಸಲುವಾಗಿ ಕೃಷಿ ತಜ್ಙರಿಂದ ಸಲಹೆ ಮತ್ತು ನೆರವನ್ನು ಕೊಡಿಸಲಾಗುವುದು. ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ. ಅರ್ಜಿದಾರರು ವೆಬ್ ಪೇಜ್ ಮೂಲಕ ಆನ್-ಲೈನ್ ಅರ್ಜಿಯನ್ನು ಸಲ್ಲಿಸಬೇಕು.
ವೈಯಕ್ತಿಕ ಕೊಳವೆಬಾವಿ ಯೋಜನೆ: ಗ್ರಾಮೀಣ ಪ್ರದೇಶದಲ್ಲಿ ಎಲ್ಲೆಲ್ಲಿ ಹರಿಯುವ ನೀರಿನ ವ್ಯವಸ್ಥೆ ಲಭ್ಯವಿರುವುದಿಲ್ಲವೋ ಅಂತಹ ಸ್ಥಳದಲ್ಲಿ ತಜ್ಞ ಭೂವಿಜ್ಞಾನಿಗಳ ಮೂಲಕ ಗುರುತಿಸಲ್ಪಟ್ಟ ಜಲಬಿಂದು ವ್ಯಾಪ್ತಿಯೊಳಗೆ ನೆಲದಡಿಯಲ್ಲಿ ಕೊಳವೆಬಾವಿಯನ್ನು ಕೊರೆದು, ನಂತರ ನೀರು ಸಂಗ್ರಹಿಸಲು ಟ್ಯಾಂಕ್ನ್ನು ನಿರ್ಮಿಸಿಕೊಟ್ಟು, ಅದಕ್ಕೆ ಅಳವಡಿಸಿದ ಪೈಪ್ ಮೂಲಕ ಕೃಷಿ ಭೂಮಿಗೆ ನೀರನ್ನು ಒದಗಿಸಲಾಗುತ್ತದೆ. ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ 01 ಎಕರೆ 20 ಗುಂಟೆಯಿಂದ 5 ಎಕರೆ ಭೂಮಿಯನ್ನು ಹೊಂದಿರುವ ಫಲಾನುಭವಿಗೆ ಒಂದು ಕೊಳವೆಬಾವಿ ಕೊರೆಯಿಸಿ ಅಥವಾ ತೆರೆದ ಬಾವಿಯನ್ನು ನಿರ್ಮಿಸಿ, ಅದಕ್ಕೆ ನಿಗಮದಿಂದ ಪಂಪ್ಸೆಟ್ನ್ ಅಳವಡಿಸಲಾಗುವುದು. ಪಂಪ್ಸೆಟ್ ಮತ್ತು ವಿದ್ಯುದ್ದೀಕರಣ ಸೇರಿ ಒಟ್ಟು ವೆಚ್ಚ ರೂ.1.50 ಲಕ್ಷವಾಗಿದೆ. ಅರ್ಜಿದಾರರು ವೆಬ್ ಪೇಜ್ ಮೂಲಕ ಆನ್-ಲೈನ್ ಅರ್ಜಿಯನ್ನು ಸಲ್ಲಿಸಬೇಕು
ಅಲ್ಪಸಂಖ್ಯಾತ ಸಮುದಾಯದ ರೈತರಿಗೆ ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ
ಸರ್ಕಾರಿ ಆದೇಶದಲ್ಲಿ ಸೂಚಿಸಿರುವಂತೆ ಫಲಾನುಭವಿಯು ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕು.
ಆನ್ ಲೈನ್ ಅರ್ಜಿ
ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
kmdc.kar.nic.in/loan/login.aspx
ಸಹಾಯವಾಣಿ: 8277799990