ಅಲ್ಪಸಂಖ್ಯಾತ ವರ್ಗದ ಕುಲಕಸುಬುದಾರರಿಗೆ ತರಬೇತಿ ನೀಡಿ, ಅವರು ತಮ್ಮ ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯವನ್ನು ವೃದ್ಧಿಸಿಕೊಂಡು ಅದೇ ಕಸುಬನ್ನು ಮುಂದುವರೆಸಲು ಅಥವಾ ಸಣ್ಣ ವ್ಯಾಪಾರವನ್ನು ಪ್ರಾರಂಭಿಸಲು ಅಥವಾ ಅಭಿವೃದ್ಧಿಗೊಳಿಸುವ ಸಲುವಾಗಿ, ನಿಗಮದಿಂದ ಕಡಿಮೆ ಬಡ್ಡಿದರದಲ್ಲಿ ರೂ.50,000/-ದ ವರೆಗೆ ಸಾಲಸೌಲಭ್ಯವನ್ನು ಕಲ್ಪಿಸಲಾಗುತ್ತದೆ. ಇದರಲ್ಲಿ, ಶೇ.50ರಷ್ಟು ಸಾಲವನ್ನು 36 ತಿಂಗಳಿನಲ್ಲಿ ಫಲಾನುಭವಿಯು ಮರುಪಾವತಿ ಮಾಡಿದಲ್ಲಿ, ಉಳಿದ ಶೇ.50ರಷ್ಟು ಹಣವನ್ನು ‘ಬ್ಯಾಕ್‌ಎಂಡ್” ಸಹಾಯಧನವನ್ನಾಗಿ ಪರಿಗಣಿಸಲಾಗುತ್ತದೆ. ಫಲಾನುಭವಿಯು ತಾನು ಪಡೆದ ಸಾಲವನ್ನು 36 ತಿಂಗಳೊಳಗಾಗಿ ಮರುಪಾವತಿ ಮಾಡಲು ವಿಫಲನಾದಲ್ಲಿ, ಶೇ.50ರಷ್ಟು ಬ್ಯಾಕ್‌ಎಂಡ್ ಸಹಾಯಧನವನ್ನು ಸಹ ಸಾಲವೆಂದು ಪರಿಗಣಿಸಲಾಗುತ್ತದೆ.
ಅಲ್ಪಸಂಖ್ಯಾತ ಸಮುದಾಯದ ರೈತರಿಗೆ ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ
ಸರ್ಕಾರಿ ಆದೇಶದಲ್ಲಿ ಸೂಚಿಸಿರುವಂತೆ ಫಲಾನುಭವಿಯು ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕು.
ಆನ್ ಲೈನ್ ಅರ್ಜಿ
ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
kmdc.kar.nic.in/loan/login.aspx
ಸಹಾಯವಾಣಿ: 8277799990