ಕರ್ನಾಟಕ ಸರ್ಕಾರ ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ/ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ/ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ
ಕರ್ನಾಟಕ ರಾಜ್ಯದ ಮಹಿಳೆಯರಿಗೆ ವಿದ್ಯಾರ್ಥಿನಿಯರು ಸೇರಿದಂತೆ ಮಾತ್ರ ಉಚಿತ ಪ್ರಯಾಣ ಸೌಲಭ್ಯ ಅನ್ವಯಿಸುತ್ತದೆ, ಈ ಮಹಿಳಾ ಪ್ರಯಾಣಿಕರ ಪೈಕಿ 6 ವರ್ಷದಿಂದ ಮೇಲ್ಪಟ್ಟ ಬಾಲಕಿಯರು ಮತ್ತು ಅಲ್ಪ ಸಂಖ್ಯಾತರು ಸಹ ಒಳಗೊಂಡಿರುತ್ತಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಗರ ಸಾರಿಗೆ, ಸಾಮಾನ್ಯ ಮತ್ತು ವೇಗದೂತ (ತಡೆರಹಿತ ಸಾರಿಗೆಗಳು ಒಳಗೊಂಡಂತೆ) ಸಾರಿಗೆಗಳಲ್ಲಿ ಮಾತ್ರ ಮಹಿಳೆಯರು ವಿದ್ಯಾರ್ಥಿನಿಯರು
ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
ಬಸ್ಸಿನಲ್ಲಿ ಪ್ರಯಾಣಿಸುವಾಗ ಕರ್ನಾಟಕ ರಾಜ್ಯಕ್ಕೆ ಸೇರಿರುವ ವಿಳಾಸವನ್ನು ಒಳಗೊಂಡಿರುವ ಯಾವುದಾದರೋ ಒಂದು ಗುರುತಿನ ಚೀಟಿ (ಆಧಾರ್ ಕಾರ್ಡ್, ಚುನಾವಣಾ ಆಯೋಗ ಗುರುತಿನ ಚೀಟಿ) ಯನ್ನು ಹೊಂದಿರಬೇಕು.
ಕರ್ನಾಟಕ ರಾಜ್ಯಕ್ಕೆ ಸೇರಿರುವ ವಿಳಾಸವನ್ನು ಒಳಗೊಂಡಿರುವ ಯಾವುದಾದರೋ ಒಂದು ಗುರುತಿನ ಚೀಟಿ (ಆಧಾರ್ ಕಾರ್ಡ್, ಚುನಾವಣಾ ಆಯೋಗ ಗುರುತಿನ ಚೀಟಿ) .