ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್ಗಳು ಅಪಘಾತಕ್ಕೀಡಾಗಿ ಮರಣಕ್ಕೆ ತುತ್ತಾಗುವ, ಶಾಶ್ವತ ದುರ್ಬಲತೆ ಅಥವಾ ತಾತ್ಕಾಲಿಕ ದುರ್ಬಲತೆ ಹೊಂದಿದ ಸಂದರ್ಭದಲ್ಲಿ ಅವರ
ಅವಲಂಬಿತರಿಗೆ ಅಪಘಾತ ವಿಮಾ ಸೌಲಭ್ಯ
ಅಪಘಾತದಿಂದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್ಗಳು ಮರಣ ಹೊಂದಿದಲ್ಲಿ, ಅವರ ನಾಮನಿರ್ದೇಶಿತರಿಗೆ ರೂ.5 ಲಕ್ಷ ಪರಿಹಾರ.
ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಾಗ, ಫಲಾನುಭವಿಗೆ ದುರ್ಬಲತೆಯ ಪ್ರಮಾಣಕ್ಕನುಗುಣವಾಗಿ ರೂ.2 ಲಕ್ಷದ ವರೆಗೆ ಪರಿಹಾರ.
ಅಪಘಾತಕೊಳ್ಳಗಾಗಿ ಆಸ್ಪತ್ರೆಯಲ್ಲಿ 15 ದಿನಗಳಿಗಿಂತ ಕಡಿಮೆ ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ, ಗರಿಷ್ಠ ರೂ. 50,000/- ರವರೆಗೆ; ಅಥವಾ ನಿಖರ ಆಸ್ಪತ್ರೆ ವೆಚ್ಚ, ಇವುಗಳಲ್ಲಿ ಯಾವುದು ಕಡಿಮೆಯೊ ಅದನ್ನು ಹಾಗೂ 15 ದಿನಗಳಿಗಿಂತ ಹೆಚ್ಚು ದಿನ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ, ಗರಿಷ್ಠ ರೂ. 1 ಲಕ್ಷದ ವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ, ಇವುಗಳಲ್ಲಿ ಯಾವುದು ಕಡಿಮೆಯೊ ಅದನ್ನು ಮರುಪಾವತಿ ಪಡೆಯಬಹುದು
ರಿಯಾಯಿತಿ
ಯಾರಿಗೆ / ಅರ್ಹತೆ ?
ಯಾರಿಗೆ?
ಕಾರ್ಮಿಕರಿಗೆ
ಅರ್ಹತೆಗಳು/ಮಾನದಂಡಗಳು
ಈ ಯೋಜನೆಯು ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ವಯಿಸುತ್ತದೆ.
ಯೋಜನೆಯು ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್ಗಳಿಗೆ ಅನ್ವಯಿಸುತ್ತದೆ.
ಯೋಜನೆಗೆ ವಯಸ್ಸಿನ ಮಿತಿ 20 ರಿಂದ 70 ವರ್ಷಗಳು.
ಯೋಜನೆಯ ಸೌಲಭ್ಯಗಳು ಕರ್ತವ್ಯದಲ್ಲಿರುವಾಗ ಹಾಗೂ ಇಲ್ಲದಿರುವಾಗಲೂ ಸಹ ಲಭ್ಯವಾಗುತ್ತವೆ.
ಚಾಲಕರು ಕರ್ನಾಟಕ ರಾಜ್ಯದಲ್ಲಿ ಸಾರಿಗೆ ಇಲಾಖೆಯಿಂದ ಪಡೆದ ಊರ್ಜಿತ ಚಾಲನಾ ಪರವಾನಗಿ ಹೊಂದಿರಬೇಕು
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸುವ ವಿಧಾನ
ಸಲ್ಲಿಸಬೇಕಾದ ದಾಖಲೆಗಳು
ಸಂಪರ್ಕ
4ನೇ ಮಹಡಿ, ವಿಕಾಸ ಸೌಧ,
ಡಾ: ಬಿ.ಆರ್. ಅಂಬೇಡ್ಕರ್ ವಿಧಿ,
ಬೆಂಗಳೂರು-01.