ಬಂಡೂರು ಕುರಿ ಸಂವರ್ಧನಾ ಕೇಂದ್ರ, ಧನಗೂರು ಮಳವಳ್ಳಿ ತಾಲ್ಲೂಕು, ಮಂಡ್ಯ ಜಿಲ್ಲೆ-ಇಲ್ಲಿ ಕುರಿ-ಮೇಕೆ ಪಾಲಕರಿಗೆ ಮೂರು ದಿನಗಳ ವಸತಿ ಸಹಿತ ಕುರಿ ಮತ್ತು ಮೇಕೆ ಸಾಕಾಣಿಕೆ ಬಗ್ಗೆ ವೈಜ್ಞಾನಿಕ ತರಬೇತಿ ನೀಡಲಾಗುವುದು.
ಸಹಕಾರ ಸಂಘಗಳ ಸ್ಥಾಪನೆ ಮತ್ತು ಅದರ ಮೂಲಕ ಕುರಿ ಮೇಕೆ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳುವ ಬಗ್ಗೆ ಸಹಕಾರ ಸಂಘಗಳ ಸದಸ್ಯರಿಗೆ ತರಬೇತಿ ನೀಡಲಾಗುವುದು.
ಕುರಿ ಮತ್ತು ಉಣ್ಣೆ ಅಭಿವೃದ್ಧಿ ಯೋಜನೆ ರಾಣೆಬೆನ್ನೂರು ಕೇಂದ್ರದಲ್ಲಿ 25 ಅಭ್ಯರ್ಥಿಗಳಿಗೆ ಪ್ರತಿವರ್ಷ ಆರು ತಿಂಗಳುಗಳ ಉಣ್ಣೆ ಸಂಗ್ರಹಣೆ, ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಬಗ್ಗೆ ತರಬೇತಿ ಕಾರ್ಯಕ್ರಮವಿರುತ್ತದೆ. ಅಲ್ಲದೆ ರಾಜ್ಯಾದ್ಯಾಂತ ತಾಲ್ಲೂಕು ಮಟ್ಟದಲ್ಲಿ ಕುರಿ/ಮೇಕೆ ಸಾಕಾಣಿಕೆ, ಸಹಕಾರ ಸಂಘಗಳ ಸ್ಥಾಪನೆ ಮತ್ತು ಕಾರ್ಯಚಟುವಟಿಕೆಗಳ ಬಗ್ಗೆ ತರಬೇತಿ ನೀಡಲಾಗುತ್ತಿದೆ
ರಿಯಾಯಿತಿ
ಯಾರಿಗೆ / ಅರ್ಹತೆ ?
ಯಾರಿಗೆ?
ಕುರಿ ಮತ್ತು ಉಣ್ಣೆ ಸಾಕಣೆಗಾರರಿಗೆ
ಅರ್ಹತೆಗಳು/ಮಾನದಂಡಗಳು
ಸಹಕಾರ ಸಂಘಗಳ ಸದಸ್ಯರಿಗೆ ತರಬೇತಿಯಲ್ಲಿ ಆದ್ಯತೆ ಇರುತ್ತದೆ.
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸುವ ವಿಧಾನ
ಸಲ್ಲಿಸಬೇಕಾದ ದಾಖಲೆಗಳು
ಸಂಪರ್ಕ
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ
ಕುರಿ ಭವನ, ಹೆಬ್ಬಾಳ, ಬೆಂಗಳೂರು-24