ಯೋಜನೆಯಡಿ ಬಿಪಿಎಲ್ ಕುಟುಂಬದ 2 ಹೆಣ್ಣು ಮಕ್ಕಳಿಗೆ ಪ್ರತಿ ಮಗುವಿನ ಹೆಸರಿನಲ್ಲಿ ವಾರ್ಷಿಕ ರೂ.3000/-ದಂತೆ 15 ವರ್ಷಗಳವರೆಗೆ ಒಟ್ಟು ರೂ.45,000/-ಗಳನ್ನು ಅಂಚೆ ಇಲಾಖೆಯ ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಠೇವಣಿ ಹೂಡಲಾಗುತ್ತದೆ.
21 ವರ್ಷ ಅವಧಿ ಪೂರ್ಣಗೊಂಡ ನಂತರ ಅಂದಾಜು ಪರಿಪಕ್ವ ಮೊತ್ತ ರೂ.1.27 ಲಕ್ಷ ನೀಡಲಾಗುತ್ತದೆ.
10 ನೇ ತರಗತಿ ನಂತರ ಉನ್ನತ ವಿದ್ಯಾಭ್ಯಾಸಕ್ಕಾಗಿ ಖಾತೆಯಲ್ಲಿರುವ ಮೊತ್ತದ ಶೇ.50ರಷ್ಟು ಭಾಗವನ್ನು ಹಿಂಪಡೆಯಲು ಯೋಜನೆಯಡಿ ಅವಕಾಶವಿರುತ್ತದೆ.
ರಿಯಾಯಿತಿ
ಯಾರಿಗೆ / ಅರ್ಹತೆ ?
ಯಾರಿಗೆ?
ಹೆಣ್ಣು ಮಕ್ಕಳಿಗೆ
ಅರ್ಹತೆಗಳು/ಮಾನದಂಡಗಳು
ಹೆಣ್ಣು ಮಗು ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಿಸಿರಬೇಕು ಹಾಗೂ ಕುಟುಂಬವು ಬಿಪಿಎಲ್ ಕಾರ್ಡ್ ಹೊಂದಿರಬೇಕು.
ಕುಟುಂಬದ ಮಕ್ಕಳ ಸಂಖ್ಯೆ ಒಟ್ಟು 02ನ್ನು ಮೀರಕೂಡದು ಪೋಷಕರು ಶಾಶ್ವತ ಕುಟುಂಬ ಯೋಜನೆ ಪದ್ಧತಿಯನ್ನು ಅಳವಡಿಸಿಕೊಂಡಿರಬೇಕು.
ಮಗು ಜನಿಸಿದ 1 ವರ್ಷದೊಳಗಾಗಿ ಅರ್ಜಿ ಸಲ್ಲಿಸಿ, ಮಂಜೂರಾಗಿ ಭಾರತೀಯ ಜೀವ ವಿಮಾ ನಿಗಮಕ್ಕೆ ಮಾಹಿತಿ ನೀಡಬೇಕು.ಮೊತ್ತ ಪಡೆಯಲು ಅರ್ಹತೆಗಳು: ಫಲಾನುಭವಿ ಕನಿಷ್ಠ 8ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
18 ವರ್ಷ ಪೂರ್ಣಗೊಂಡ ನಂತರವೇ ವಿವಾಹವಾಗಬೇಕು.
6 ವರ್ಷದವರೆಗೆ ಶಾಲಾ ಪೂರ್ವ ಶಿಕ್ಷಣಕ್ಕೆ ಹಾಜರಾಗಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗೆ ದಾಖಲಾಗಬೇಕು
ಬಾಲ ಕಾರ್ಮಿಕಳಾಗಿರಬಾರದು ಮತ್ತು ಸಾಗಾಣಿಕೆಗೆ ಒಳಪಟ್ಟಿರಬಾರದು.
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸುವ ವಿಧಾನ
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)
ಸಲ್ಲಿಸಬೇಕಾದ ದಾಖಲೆಗಳು
ಬಿಪಿಎಲ್ ಕಾರ್ಡ್
ಜನನ ಪ್ರಮಾಣ ಪತ್ರ
ಸಂಪರ್ಕ
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯ ಕಚೇರಿನ್ನು ಸಂಪರ್ಕಿಸುವುದು